January 31, 2026

ಉಳ್ಳಾಲ: ತಲಪಾಡಿಯಲ್ಲಿ ಆಟೋ ರಿಕ್ಷಾಕ್ಕೆ ಬಸ್ ಡಿಕ್ಕಿ: ಆಟೋ ರಿಕ್ಷಾದಲ್ಲಿದ್ದ ಐದು ಮಂದಿ ಮೃತ್ಯು

0
image_editor_output_image1251505967-1756372603531

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕೆ.ಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!