ಭಾರೀ ಮಳೆ ಹಿನ್ನೆಲೆ: ನಾಳೆ ಆ. 30 ದ.ಕ ಜಿಲ್ಲಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.30ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿದ ಮುನ್ಸೂಚನೆಯಂತೆ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರ ತೀರಕ್ಕೆ ತೆರಳಬಾರದು ಎಂದು ಅವರು ತಿಳಿಸಿದ್ದಾರೆ.




