March 18, 2026

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಪೂರೈಕೆ: ಆರೋಪಿ ಸೆರೆ

0
image_editor_output_image209641772-1756523701750.jpg

ಮಂಗಳೂರು: ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

ಬಂದಿತ ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್ ಗಾಂಜಾ ಮತ್ತು ಎಮ್.ಡಿ.ಎಂ.ಎ ಪಿಲ್ಸ್ ಅನ್ನು ಸರಬರಾಜು ಮಾಡುತ್ತಿದ್ದ ಆರೋಪಿ. ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ MDMA PILLS ಅನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿ ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆ.29 ರಂದು ಮಾದಕ ವಸ್ತುವನ್ನು ಪತ್ತೆ ಹಚ್ಚಲಾಯಿತು.

ಆತನ ವಶದಿಂದ 10.85,000 ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು . 11,05,500 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!