ದಾಖಲೆಗಳೊಂದಿಗೆ ಎಸ್ಐಟಿ ಕಚೇರಿಗೆ ಹಾಜರಾದ ಸೌಜನ್ಯಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದ ಎದುರು ನಿನ್ನೆ ಸೌಜನ್ಯಪರ ಹೋರಾಟಗಾರ ಗಿರೀಶ್ ಮಟ್ಟಣನವರ್ ವಿಚಾರಣೆಗೆ ಹಾಜರಾಗಿದ್ದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿಗಳ ರೀತಿಯೇ ಅವರಿಗೆ ಮಾಹಿತಿಯನ್ನು ನೀಡಿ ಅಚ್ಚರಿ ಮೂಡಿಸಿದರು. ಮಾಧ್ಯಮಗಳಲ್ಲಿ ಬರುವ ಬ್ರೇಕಿಂಗ್ ಸುದ್ದಿ ರೀತಿಯೇ ಹೇಳಿದ ಅವರು ನನಗೆ SIT ಕಚೇರಿ ಮೆಟ್ಟಿಲು ಹತ್ತುತ್ತಿದ್ದಂತೆಯೇ ಎದೆ ಢವ ಢವ ಅಂತಾ ಬಡಿಕೊಳ್ಳಲು ಪ್ರಾರಂಭಿಸಿತು. ಜಗತ್ತಿನಲ್ಲಿ ಎಷ್ಟು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳಿವೆ ಅಂತಾ ಕೇಳಿದ್ರು. ನಂತರ ಯಾವ ಯಾವ ಪಾದ್ರಿ, ಮೌಲಿ, ಶೇಠ್ ಗಳಿಂದ ದೇವಸ್ಥಾನ ಹಾಳು ಮಾಡಲು ಎಷ್ಟು ದುಡ್ಡು ಕೊಟ್ಟಿದ್ದಾರೆ ಅಂತಾ ಕೇಳಿದ್ರು. ಅದನ್ನು ಪೂರ್ತಿಯಾಗಿ ಹೇಳಿದ್ದೇನೆ ಎಂದರು.




