January 31, 2026

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಪೋಟ: 15 ವರ್ಷದ ಬಾಲಕ ಸಾವು

0
image_editor_output_image-2067035701-1756533256324.jpg

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ನಡೆದಿದೆ.

15 ವರ್ಷದ ತನುಷ್ ರಾವ್ ಸಾವನ್ನಪ್ಪಿದ ಬಾಲಕ. ನಿನ್ನೆ(ಆ.29) ರಂದು ಗಣೇಶ ವಿಸರ್ಜನೆಯ ವೇಳೆ ಸುಡುಮದ್ದು ಪ್ರದರ್ಶನ ನಡೆದಿತ್ತು. ಈ ವೇಳೆ ಪಟಾಕಿ ಸ್ಫೋಟಗೊಂಡಿದ್ದು, ಅದರ ಕಿಡಿ ಬಾಲಕನ ದೇಹಕ್ಕೆ ಸ್ಪರ್ಶಿಸಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇನ್ನು ಈ ಘಟನೆಯಲ್ಲಿ ವಿದ್ಯಾರ್ಥಿಗಳಾದ ಗಣೇಶ್, ಯೋಗೇಶ್, ಪವರ್ ಲಿಪ್ಟರ್ ಚಾಲಕ ಮುನಿರಾಜು, ನಾಗರಾಜು, ಚೇತನ್ ಶಾವಿ ಎಂಬುವರಿಗೆ ಸುಟ್ಟ ಗಾಯಗಳಾಗಿವೆ. ಇದೇ ವೇಳೆ ಬಂದೋಬಸ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಜಾಕಿರ್ ಹುಸೇನ್ ಎಂಬುವರ ಕೈಗೆ ಪಟಾಕಿ ಸಿಡಿದು ಗಂಭೀರ ಗಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!