ಧರ್ಮಸ್ಥಳ, ಹೆಗ್ಗಡೆ ಕುಟುಂಬದ ಅವಹೇಳನಕಾರಿ ವಿಡಿಯೋ ಡಿಲೀಟ್ ಮಾಡಲು ಕೋರ್ಟ್ ಸೂಚನೆ
ಬೆಂಗಳೂರು: ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಅವರ ಕುಟುಂಬಸ್ಥರ ಮೇಲೆ ಅವಹೇಳನಕಾರಿಯಾಗಿ ಮಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆಯುವಂತೆ ಕೋರ್ಟ್ ಆದೇಶಿಸಿದೆ. ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರು ಆದೇಶ ಮಾಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಆಧಾರ ರಹಿತ ಆರೋಪಗಳನ್ನು, ಮಾನಹಾನಿ ಹೇಳಿಕೆಗಳನ್ನು ನೀಡುತ್ತಿದ್ದವರ ಬಧಿಗ್ಗೆ ಕೋರ್ಟ್ ಚಾಟಿ ಬೀಸಿದೆ. ಯೂಟ್ಯೂಬ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದ್ದ ಆಧಾರ ರಹಿತ ವಿಡಿಯೋ ಮತ್ತು ಪೋಸ್ಟ್‌ಗಳಿಗೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ತಕ್ಷಣವೇ ಅವುಗಳನ್ನು ಡಿಲೀಟ್ ಮಾಡುವಂತೆ ಸೂಚಿಸಿದೆ.
ಚಿನ್ನಯ್ಯನ ದೂರಿನ ಆಧಾರದಲ್ಲಿಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಅಪರಾಧ ಸಂಖ್ಯೆ 39/ 2025 ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾವಶ್ಯಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರನ್ನು ಅವಹೇಳನಕಾರಿಯಾಗಿ ನಿಂದಿಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ಜಯಂತ್ ಟಿ. ಹಾಗೂ ಇತರರ ವಿರುದ್ಧ ಡಿ.ಹರ್ಷೇಂದ್ರ ಕುಮಾರ್ ಅವರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದ್ದರು.




