January 31, 2026

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ: ಮೃತಪಟ್ಟ 11 ಮಂದಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ RCB

0
image_editor_output_image868694320-1756537311847.jpg

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 80 ದಿನಗಳ ನಂತರ ಆ‌ರ್ ಸಿಬಿ ಮತ್ತೊಂದು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಲ್ಲದೆ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಭಾವುಕ ಪೋಸ್ಟ್ ಹಂಚಿಕೊಂಡಿದೆ.

ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.

ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್ ಸಿಬಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.

Leave a Reply

Your email address will not be published. Required fields are marked *

error: Content is protected !!