ಗಣೇಶ ವಿಸರ್ಜನಾ ಮೆರವಣಿಯಲ್ಲಿ ಡಿಜೆ ಸೌಂಡ್‌ನಿಂದ ಕುಸಿದು ಬಿದ್ದು ವ್ಯಕ್ತಿ ಸಾವು
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಡಿಜೆ ಸೌಂಡ್‌ನಿಂದ ಹೃದಯಾಘಾತಕ್ಕೆ ಬಲಿಯಾದ ಘಟನೆ ಕೆಆರ್‌ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಗಣೇಶ ಹಬ್ಬದಂದು ಜೊತ್ತನಪುರ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದರು.





