ವರದಕ್ಷಿಣೆ ಕಿರುಕುಳ: ನೇಣಿಗೆ ಶರಣಾದ ಮಹಿಳೆ
ಬೆಂಗಳೂರು: ವರದಕ್ಷಿಣೆ ಕಿರುಕುಳ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ.
ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಪೂಜಾಶ್ರೀ ಮತ್ತು ನಂದೀಶ್ ಮದುವೆಯಾಗಿದ್ದು ಹೆಣ್ಣು ಮಗುವಿದೆ. ದಂಪತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಮೂರು ವರ್ಷದ ಹಿಂದೆ ಮನೆಯವರ ನಿಶ್ಚಯದಂತೆ ಪೂಜಾಶ್ರೀ ಮತ್ತು ನಂದೀಶ್ ಮದುವೆಯಾಗಿದ್ದು ಹೆಣ್ಣು ಮಗುವಿದೆ. ದಂಪತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.