March 13, 2026

ಮಂಗಳೂರು:ಗಾಂಜಾ ಮಾರಾಟ ಮಾಡುತ್ತಿದ್ದ ಬಿಹಾರದ ಇಬ್ಬರು ಆರೋಪಿಗಳ ಬಂಧನ

0
image_editor_output_image-1618619478-1756796732825.jpg

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಮೇಲೆ ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ಅರ್ನೌಟ್ ಗ್ರಾಮದ ಹರ್ಷ ಕುಮಾರ್ (22 ) ಮತ್ತು ಶಾಪುರ್ ಗ್ರಾಮದ ಅಮರ್ ಕುಮಾರ (28) ಎಂದು ಗುರುತಿಸಲಾಗಿದೆ.

ಆರೋಪಿಗಳು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ರೈಲ್ವೇ ಸ್ಟೇಶನ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದರು. ಬಂಧಿತ ಆರೋಪಿಗಳಾದ ಹರ್ಷ ಕುಮಾರ್ ಎಂಬಾತನಿಂದ 1 ಕೆ ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ನಿಂದ 80 ಗ್ರಾಂ ಗಾಂಜಾ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದ್ದು, , ಇದರ ಮೌಲ್ಯ ಸುಮಾರು 75,000 ರೂಪಾಯಿಗಳಷ್ಟು ಆಗಿರುತ್ತದೆ.

ಆರೋಪಿಗಳು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಉಪಯೋಗಿಸುತ್ತಿದ್ದ 2 ಮೊಬೈಲ್ ಪೋನ್‌ಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಾಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬಾತ ದಿಲ್ಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿರುವುದಾಗಿದೆ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!