March 13, 2026

ಅನೈತಿಕ ಸಂಬಂಧದ ಶಂಕೆ: ಲಿವ್ಇನ್ ಗೆಳತಿಯನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಿದ 52 ವರ್ಷದ ವ್ಯಕ್ತಿ

0
image_editor_output_image913327875-1756798485292.jpg

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ.

ವನಜಾಕ್ಷಿ (26) ಮೃತ ಮಹಿಳೆ ಹಾಗೂ ಆರೋಪಿಯನ್ನು ವಿಠ್ಠಲ (52) ಎಂದು ಗುರುತಿಸಲಾಗಿದ್ದು, ಕ್ಯಾಬ್‌ ಚಾಲಕನಾಗಿದ್ದ.

ಮಳೆನಲ್ಲಸಂದ್ರದಲ್ಲಿ ಕಳೆದ ಮೂರು ವರ್ಷಗಳಿಂದ ಇಬ್ಬರು ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ ಇತ್ತೀಚೆಗೆ ಮೃತ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಕೊಲೆ ಆರೋಪಿ ವಿಠ್ಠಲನಿಗೆ ಅನುಮಾನ ಮೂಡಿತ್ತು. ಇದರಿಂದಾಗಿ ವಿಠ್ಠಲ ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ. ಇದೇ ಸಮಯದಲ್ಲಿ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಕಾರಿನಲ್ಲಿ ಹೋಗುತ್ತಿರುವುದನ್ನು ಕಂಡು ಕೋಪಗೊಂಡಿದ್ದ.

ಆಕೆಯ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿ ಆರೋಪಿ ತನ್ನ ಕಾರಿನಲ್ಲಿದ್ದ 5 ಲೀಟರ್ ಪೆಟ್ರೋಲ್ ತೆಗೆದು ವನಜಾಕ್ಷಿ ಮೇಲೆ ಸುರಿಯಲು ಮುಂದಾದ. ಇದರಿಂದ ಭಯಭೀತಳಾದ ವನಜಾಕ್ಷಿ ಕಾರಿನಿಂದ ಇಳಿದು ಅಲ್ಲಿಂದ ಓಡಿಹೋಗಿದ್ದಾಳೆ. ಆದರೂ ಅಷ್ಟಕ್ಕೆ ಬಿಡದ ಆರೋಪಿ ಆಕೆಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

ತೀವ್ರವಾಗಿ ಸುಟ್ಟು ಗಾಯಗಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಸೆ.1) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಸಂಬಂಧ ಹುಳಿಮಾವು ಪೊಲೀಸರು ಆರೋಪಿ ವಿಠ್ಠಲನನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!