March 13, 2026

ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯ ಮೇಲೆ ಆರೋಪವಿದೆ: ಹಾಗಾದರೆ ಬಿಜೆಪಿ ಯಾರ ಪರ? ಸಿದ್ದರಾಮಯ್ಯ ಪ್ರಶ್ನೆ

0
image_editor_output_image-489907451-1756878205176.jpg

ಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ? ಒಂದು ಕಡೆ ವೀರೇಂದ್ರ ಹೆಗ್ಗಡೆಯವರ ಪರ ಎನ್ನುತ್ತಾರೆ, ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ. ನಿಜವಾಗಿಯೂ ನೀವು ಯಾರ ಪರ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಶ್ನೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿಯವರು ಈಗ ಎನ್‌ಐಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!