March 13, 2026

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್.ಎಂ.ಡಿ ಮನೆ ಮೇಲೆ ಬೆಳ್ತಂಗಡಿ ಪೊಲೀಸರ ದಾಳಿ

0
image_editor_output_image-449936021-1756986010295.jpg

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್.ಎಂ.ಡಿ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ನ್ಯಾಯಾಲಯದಿಂದ ಸೆಪ್ಟೆಂಬರ್ 3 ರಂದು ಸರ್ಚ್ ವಾರಂಟ್ ಪಡೆದು ಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಲಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!