ಧರ್ಮಸ್ಥಳ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ: ಅಮಿತ್ ಶಾ
ನವದೆಹಲಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಗೆ ನೀಡುವಂತೆ ಕರ್ನಾಟಕದ ಸ್ವಾಮಿಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದೆ.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿತು.
ಈ ವೇಳೆ ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಮಹತ್ವದ ಭರವಸೆ ನೀಡಿದ್ದಾರೆ.




