March 13, 2026

ಬಂಟ್ವಾಳ: ಮೇಯಲು ಬಿಟ್ಟ ದನವನ್ನು ಕಳವುಗೈದು ಮಾಂಸ ಮಾಡಿದ ಪ್ರಕರಣ: ಮೂವರು ಆರೋಪಿಗಳ ಬಂಧನ

0
IMG-20250905-WA0003.jpg

ಬಂಟ್ವಾಳ: ಮೇಯಲು ಬಿಟ್ಟಿದ್ದ ದನವೊಂದನ್ನು ಕಳವು ಮಾಡಿ ಅಲ್ಲೇ ವದೆ ಮಾಡಿ ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದ ಘಟನೆ ನಡೆದಿದ್ದು, ಇದೀಗ ಬಾರಿ ಸುದ್ದಿ ಮಾಡಿರುವ ಪೆರ್ನೆ ಪ್ರಕರಣದ ಆರೋಪಿಗಳು ಕೂಡ ಇವರೇ ಆಗಿದ್ದಾರೆ ಎಂದು ದ.ಕ.ಜಿಲ್ಲಾ ಪೋಲೀಸ್ ಪ್ರಕಟನೆಯಲ್ಲಿ ತಿಳಿಸಿದೆ.

ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರು ಆರೋಪಿಗಳಾಗಿದ್ದಾರೆ.

ಆ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಜಾನುವಾರು ಕಳವು ನಡೆದಿದ್ದು ಹಾಗೂ ಅದರ ಅಂಗಾಗಗಳು ಮರುದಿನ ಆ.15 ರಂದು ಅಲ್ಲೆ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಸೆ. 05 ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಯ ವೇಳೆ ಸೆ. 04 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ:76/2025, Sec:THE BHARATIYA NYAYA SANHITA (BNS), 2023 (U/s-331(4),305); THE KARNATAKA PREVENTION OF SLAUGHTER AND PRESERVATION OF CATTLE ACT-2020 (U/s-4,5) ಪ್ರಕರಣದಲ್ಲೂ ಆರೋಪಿಗಳಾಗಿರುವುದು ತಿಳಿದುಬಂದಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!