ನಾನು ಏನಾದರೂ ತಪ್ಪು ಮಾಡಿದ್ದರೆ ದೈವಗಳು ಶಿಕ್ಷೆ ಕೊಡುತ್ತದೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶ ಧರ್ಮಸ್ಥಳದಲ್ಲಿ ನಡೆದಿದೆ. ಈ ವೇಳೆ ಮಾತಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ನಾನು ಏನಾದರೂ ತಪ್ಪು ಮಾಡಿದ್ರೆ ಶಿಕ್ಷೆ ಕೊಡವುದು ಸರಕಾರವೂ ಅಲ್ಲ ಜನರು ಅಲ್ಲ ದೈವಗಳು ಶಿಕ್ಷೆ ಕೊಡುತ್ತದೆ ಎಂದರು.
ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾವೇಶದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯತೆಯಿಂದ ಕೃತಜ್ಞತೆ ಮತ್ತು ಸಂತೋಷ ವ್ಯಕ್ತಪಡಿಸಿದರು.





