March 13, 2026

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

0
image_editor_output_image-2122192826-1757161891289.jpg

ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ನಡೆದಿದೆ.

ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಘಟನೆ ನಡೆದಿದೆ. ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!