ವಿಟ್ಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ವಿಟ್ಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿ ದೇವರಾಜ್ (49) ಬಂಧಿತ.
ಈತ ತಿರುಪತಿ ತಿರುಮಲ ದೇವಸ್ಥಾನದ ಬೆಟ್ಟದಲ್ಲಿ ವಾಹನ ಪಾರ್ಕಿಂಗ್ ಕೆಲಸ ಮಾಡಿಕೊಂಡಿರುವುದರ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ತೆರಳಿ ಅಲ್ಲಿ ಆತನನ್ನು ವಶಕ್ಕೆ ಪಡೆದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.





