ಚಾರ್ಮಾಡಿ ಘಾಟ್ ನಲ್ಲಿ ಸರಣಿ ಅಪಘಾತ: KSRTC ಬಸ್ ಚಾಲಕನಿಗೆ ಗಂಭೀರ ಗಾಯ
ಚಾರ್ಮಾಡಿ ಘಾಟ್: ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗಳ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಕೆಎಸ್ಆರ್ ಟಿಸಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಈ ಅಪಘಾತ ಸಂಭವಿಸಿದೆ.
ಕೊಟ್ಟಿಗೆಹಾರ ಕಡೆ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಉಜಿರೆ ಕಡೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯ ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ.
ಘಟನೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ. ಘಟನೆಯಿಂದ ಸುಮಾರು ಎರಡು ತಾಸು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸವಾರರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಬ





