ಕುಂದಾಪುರ: ಗೋಪಾಡಿ ಬೀಚ್ ನಲ್ಲಿ ಬೆಂಗಳೂರಿನ ಮೂವರು ಯುವಕರು ನೀರುಪಾಲು
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ 7 ಜನರಲ್ಲಿ ಮೂವರು ಯುವಕರು ನೀರುಪಾಲಾದ ಘಟನೆ ಗೋಪಾಡಿ ಬೀಚ್ ನಲ್ಲಿ ಇಂದು ನಡೆದಿದೆ.
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.





