ಪ್ರೇಯಿಸಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ
ಚಿಕ್ಕಬಳ್ಳಾಪುರ : ಪ್ರೇಯಿಸಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.
ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಆರ್‌ಸಿಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದುಬಂದಿದೆ.




