ವಿಟ್ಲ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ
ವಿಟ್ಲ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರ 171ನೇ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪದ್ಮನಾಭ ಪೂಜಾರಿ
ಒಂದೇ ಜಾತಿ, ಒಂದೇ ಮತ ಎಲ್ಲರೂ ಸಮಾನರು ಎಂದು ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ
ಬ್ರಹ್ಮಶ್ರೀ ನಾರಾಯಣ ಗುರು ಸದಾ ಅನುಕರಣೀಯರು. ಅವರ ಆದರ್ಶಗಳನ್ನು, ಸಿದ್ಧಾಂತಗಳನ್ನು ಪಾಲನೆ ಮಾಡಿದರೆ ಅವರ ಜಯಂತಿ ಆಚರಣೆಯ ಉದ್ದೇಶ ಸಾರ್ಥಕ ಆಗುತ್ತದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮುರಳೀಧರ ರೈ, ಡಾ. ಕೆ.ಬಿ. ರಾಜಾರಾಮ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಮಾನಾಥ ಮೊದಲಾದವರು ಮಾತನಾಡಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ,
ಆಶ್ರಫ್ ವಿ .ಕೆ. ಎಂ, ಸುನಿತಾ, ರವಿ, ದಿನಕರ ಆಳ್ವ, ಹಂಝ, ಪ್ರವೀಣ್ ಕುಮಾರ್ ಶೆಟ್ಟಿ, ಚೇತನ್ ಕಂಬಳದಡ್ಡ, ನಾರಾಯಣ ಬದಿಗುಡ್ಡೆ, ಎಲ್ಯಣ ಪೂಜಾರಿ ಕುಂಡಡ್ಕ, ಆದಂ ಕೆದುವಡ್ಕ, ಕರೀಂ ಕುದ್ದುಪದವು, ಸುಧಾಕರ ಪೂಜಾರಿ, ಅಶೋಕ್ ಶೆಟ್ಟಿ ಅಳಿಕೆ, ದಾಮೋದರ ಪೂಜಾರಿ, ಕೇಶವ ಸುವರ್ಣ, ಅನಾಸ್, ಹನೀಫ್, ತಾರಾನಾಥ್, ಕೋಟಿಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ರಾಮಣ್ಣ ಪಿಲಿಂಜ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ ಕಾರ್ಯಕ್ರಮ ನಿರೂಪಿಸಿದರು.




