March 13, 2026

ಕೆಂಪು ಕೋಟೆಯ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶ ಕಳವು ಆರೋಪಿ ಅರೆಸ್ಟ್

0
image_editor_output_image-734692254-1757323624791.jpg

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ.

ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ದೋಚಿದ್ದ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು.

Leave a Reply

Your email address will not be published. Required fields are marked *

error: Content is protected !!