March 13, 2026

ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಗುಂಪುಗಳ ನಡುವೆ ಕಲ್ಲು ತೂರಾಟ: 21 ಜನರ ಬಂಧನ: ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಮಾಹಿತಿ

0
image_editor_output_image374415581-1757324259236.jpg

ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಆ ವೇಳೆ ಕರೆಂಟ್ ಕೂಡ ಆಫ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ವಿಚಾರವಾಗಿ ಸೋಮವಾರ ಮಂಡ್ಯ ಎಸ್ಪಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

“ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದೆ. ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ” ಎಂದರು.

Leave a Reply

Your email address will not be published. Required fields are marked *

error: Content is protected !!