March 4, 2026

ಉಪ್ಪಿನಂಗಡಿ: ದ್ವೇಷ ಭಾಷಣ: ಸಂಘಪರಿವಾರದ ಮುಖಂಡ ಗಣರಾಜ್ ಭಟ್ ಕೆದಿಲ ವಿರುದ್ಧ FIR ದಾಖಲು

0
image_editor_output_image-2006581976-1757400151517.jpg

ಉಪ್ಪಿನಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಸಂಘಪರಿವಾರದ ಮುಖಂಡ ಗಣರಾಜ್ ಭಟ್ ಕೆದಿಲ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋ ಮಾತಾ ಸಂರಕ್ಷಣಾ ಚಳವಳಿ ಪೆರ್ನೆ ಇದರ ವತಿಯಿಂದ ಗೋ ಹತ್ಯೆಯನ್ನು ಖಂಡಿಸಿ ಸೆ.6ರಂದು ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಕಡಂಬುವಿನ ಕಾರ್ಲ ರಾಮದ್ವಾರದ ಬಳಿಯಲ್ಲಿ ಪ್ರತಿಭಟನೆ ನಡೆದಿದ್ದು, ಈ ಪ್ರತಿಭಟನೆಯಲ್ಲಿ ಮಾತನಾಡಿದ ಗಣರಾಜ್ ಭಟ್ ಕೆದಿಲ ಸ್ಥಳೀಯವಾಗಿ ಧಾರ್ಮಿಕ, ಸಮುದಾಯಿಕವಾಗಿ ದ್ವೇಷ ಭಾವನೆ ಹುಟ್ಟಿಸುವ ಉದ್ದೇಶದಿಂದ ಗುಂಪು ಗುಂಪುಗಳ, ಸಮುದಾಯಗಳ ಮಧ್ಯೆ ವೈಮನಸ್ಸು ಬೆಳೆಸುವಂತೆ ಪ್ರಚೋದನಾಕಾರಿಯಾಗಿ ಮಾತನಾಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 78/2025 ಕಲಂ: 353 (2)ಬಿಎನ್‍ಎಸ್ 2023 ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!