ಉಡುಪಿ: ಜ್ಯುವೆಲ್ಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು: ಅಪಾರ ವೌಲ್ಯದ ಸೊತ್ತುಗಳು ಕಳವು
ಉಡುಪಿ: ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




