March 6, 2026

ಮುಂದಿನ ಜನ್ಮ ಅಂತಿದ್ದರೆ ನಾನು ಮುಸ್ಲಿಂನಾಗಿ ಹುಟ್ಟಬೇಕು: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಹೇಳಿಕೆ

0
n68028865517574059873599cff7bfc971d6538b442a58370b086296bb095b33ee76b56a33749c1d85e48ff.jpg

ಶಿವಮೊಗ್ಗ: ಮುಸ್ಲಿಂ ಜನಾಂಗದ ಪ್ರೀತಿಗೆ ಪಾತ್ರನಾಗಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದ್ದು, ಈ ಹೇಳಿಕೆ ಈಗ ಸಂಚಲನ ಮೂಡಿಸಿದೆ.

ಬದ್ರಾವತಿಯ ಹೊಳೆಹೊನ್ನೂರು ಸರ್ಕಲ್ ಬಳಿ ಉಸ್ಮಾನಿಯಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಈದ್ ‌ ಮಿಲಾದ್ ಹಬ್ಬದ ಅಂಗವಾಗಿ ಸೋಮವಾರ ಸಂಜೆ ಏರ್ಪಡಿಸಿದ್ದ ರಕ್ತದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರದದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿರುವ ಸಂಗಮೇಶ್ ಅವರು, ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ನಿಮ್ಮ ಮನೆಯ ಮಗನಾಗಿ ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕು ಅಂತ ಬಯಸ್ತೀನಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!