ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟ: ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ 767 ಸಂಸದರು ಮತ ಚಲಾಯಿಸಿದ್ದಾರೆ. ರಾಧಾಕೃಷ್ಣನ್ 452 ಮತಗಳನ್ನು ಪಡೆದರೆ, ಪ್ರತಿಪಕ್ಷದ ಅಭ್ಯರ್ಥಿ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರನ್ನು 300 ಸಂಸದರು ಬೆಂಬಲಿಸಿದರು. ಮತದಾನದಲ್ಲಿ ಒಟ್ಟು 767 ಮತಗಳನ್ನು ಚಲಾಯಿಸಲಾಗಿದೆ, 752 ಮಾನ್ಯವಾಗಿದೆ ಮತ್ತು 15 ಅಮಾನ್ಯವಾಗಿದೆ.




