November 8, 2026

ಮಂಗಳೂರು: ಸೋಪ್, ಪರ್ಪ್ಯೂಮ್ ತಯಾರಿಕಾ ಘಟಕಕ್ಕೆ ಬೆಂಕಿ

0
image_editor_output_image-614830938-1757494235401.jpg

ಮಂಗಳೂರು: ಅರೋಮಾಝನ್ ಪ್ರೈ. ಲಿಮಿಟೆಡ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು (ಸೆ.10) ಮುಂಜಾನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ.

ಸಿಬ್ಬಂದಿಗಳು ಕೂಡಲೇ ಎಂ.ಸಿ.ಎಫ್ ಸಂಸ್ಥೆಯ ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ಬಳಿಕ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು.

ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸೋಪ್ ಹಾಗೂ ಪರ್ಪ್ಯೂಮ್ ಗೆ ಉಪಯೋಗಿಸುವ ಲಿಕ್ವಿಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ ಆಹುತಿಯಿಂದ ಸರಿ ಸುಮಾರು 4 ಕೋಟಿ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!