ಪೆನ್ನಿನ ವಿಚಾರಕ್ಕೆ ಗಲಾಟೆ: ಕಣ್ಣುಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ
ಬಾಗಲಕೋಟೆ: ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.
ಇದರಿಂದ ತೀವ್ರಗೊಂಡಿರುವ 53 ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಇನ್ನು ಕಣ್ಣು ಕಳೆದುಕೊಂಡ ವಿದ್ಯಾರ್ಥಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.





