March 5, 2026

ಚಿಕ್ಕಮಗಳೂರು: ನೇಣು ಬಿಗಿದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image1874114508-1757571075684.jpg

ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

17 ವರ್ಷದ ಸುಶಾಂತ್ ಮೃತ ಯುವಕ. ಈತ ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದವರು ಆಸ್ಪತ್ರೆಗೆ ಗಮನಿಸಿದ ತಕ್ಷಣ ಕರೆದೊಯ್ದರೂ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾಭ್ಯಾಸದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಓದಿನ ಒತ್ತಡ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಕಾರಣ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹರಿಹರಪುರ ಪೊಲೀಸ್‌ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!