ವರದಕ್ಷಿಣೆ ಕಿರುಕುಳ: ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.




