ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ
ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಮಯೂರಿ ಗೌರವ್ ತೋಸರ್ (23) ಎಂದು ಗುರುತಿಸಲಾಗಿದೆ. ಹುಟ್ಟುಹಬ್ಬದ ಮರುದಿನ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆ-ಮಾವ ನಿರಂತರ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ನಾಲ್ಕು ತಿಂಗಳ ಅವಧಿಯಲ್ಲಿ ಹಲವಾರು ಬಾರಿ ಕುಟುಂಬಸ್ಥರ ಜೊತೆ ರಾಜಿ ಪ್ರಯತ್ನಗಳು ನಡೆದಿವೆ. ಇಷ್ಟಾದರೂ ಚಿತ್ರಹಿಂಸೆ ಮುಂದುವರಿದಿದ್ದರಿಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆ-ಮಾವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತೋಸರ್‌ನ ಪೋಷಕರು ಆಗ್ರಹಿಸಿದ್ದಾರೆ.




