ಪ್ರಚೋದನಕಾರಿ ಭಾಷಣ: ಸಿಟಿ ರವಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ FIR ದಾಖಲು
ಬೆಂಗಳೂರು: ಹಿಂದೂ ಆಗಲಿ, ಮುಸ್ಲಿಂ ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು ಅಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಸಮರ್ಥಿಸಿಕೊಂಡರು. ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ. ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಆಗಿರಲಿ, ಹಿಂದೂ ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೆ ಜನರನ್ನೆಲ್ಲ ಒಕ್ಕಲೆಬ್ಬಿಸುವುದು ಸರಿಯಲ್ಲ ಎಂದು ಹೇಳಿದರು.




