May 4, 2026

ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

0
image_editor_output_image-1559466867-1757669311213.jpg

ಚಿಕ್ಕೋಡಿ: ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಶಾಲೆಯಲ್ಲಿ ಬೆಳಗ್ಗಿನ ಉಪಹಾರಕ್ಕೆಂದು ಉಪ್ಪಿಟ್ಟು ಮಾಡಿದ್ದರು. ಆದರೆ ಉಪ್ಪಿಟ್ಟು ತಿಂದ ಮಕ್ಕಳಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡ ಮಕ್ಕಳನ್ನು ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ ಪಿಯುಸಿವರೆಗೂ ಸುಮಾರು 400ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!