ಮೈದಾನದಲ್ಲಿ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿ ಸಾವು
ತೆಲಂಗಾಣ : ಶಾಲಾ ವಿದ್ಯಾರ್ಥಿಯೋರ್ವ ಆಟದ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಜಯಂತ್ (15) ಮೃತ ಬಾಲಕ. ಜಯಂತ್ ಹನುಮಕೊಂಡದ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಮೈದಾನದಲ್ಲಿ ಆಟವಾಡುತ್ತಿದ್ದ ವೇಳೆ ಜಯಂತ್ ಏಕಾಏಕಿ ಕುಸಿದು ಬಿದ್ದಿದ್ದಾನೆ.
ಆತನ ಮೂಗು ಮತ್ತು ಕಿವಿಯಿಂದ ರಕ್ತ ಬಂದಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಜಯಂತ್ ಸಾವಿನ ಬಗ್ಗೆ ಹೆತ್ತವರು ಆತನ ಶಿಕ್ಷಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು ಶಿಕ್ಷಕರು ಮನ ಬಂದಂತೆ ಹೊಡೆಯುತ್ತಿದ್ದರು. ಇದೇ ಕಾರಣಕ್ಕೆ ಆತ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





