ಹಾಸನ: ಗಣೇಶ ಮೆರವಣಿಗೆ ವೇಳೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಮೃತ್ಯು, ಮೃತರ ಸಂಖ್ಯೆ 10ಕ್ಕೆ ಏರಿಕೆ
ಹಾಸನ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಮೊಸಳೆ ಹೊಸಳ್ಳಿಯಲ್ಲಿ ಘೋರ ದುರಂತವೇ ಸಂಭವಿಸಿತ್ತು. ಕ್ಯಾಂಟರ್ ಹರಿದು 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇದೀಗ ಮೃತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.
ಟ್ರಕ್ ಗುದ್ದಿದ ರಭಸಕ್ಕೆ ಗಂಭೀರವಾಗಿ ಗಾಯಗೊಂಡು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಯ್ಯನ ಕೊಪ್ಪಲು ಗ್ರಾಮದ ಚಂದನ್ (26) ಇಂದು(ಸೆ.13) ಮೃತಪಟ್ಟಿದ್ದಾರೆ.
ಗಾಯಾಳುಗಳು ಇನ್ನೂ ಹಲವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.




