February 2, 2026

ಧರ್ಮಸ್ಥಳದಲ್ಲಿ ಶವಹೂತ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯನ ಜಾಮೀನು ಅರ್ಜಿ ವಜಾ

0
image_editor_output_image-1648898708-1758034998676.jpg

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನಾಗಿ ಬಳಿಕ ಆರೋಪಿಯಾದಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಜಾಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬಳಿಕ ಎಸ್ ಐಟಿ ಗೆ ಪ್ರಕರಣ ಹಸ್ತಾಂತವಾಗಿತ್ತು, ಬಳಿಕ ಎಸ್ ಐಟಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿದ ಸ್ಥಳಗಳಲ್ಲಿ ಉತ್ಖನನ ನಡೆಸಿತ್ತು, ಆದರೆ ಸರಿಯಾದ ಸಾಕ್ಷಿಗಳು ಸಿಗದ ಕಾರಣ ಆತನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿತ್ತು. ಇದೀಗ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಕೀಲರನ್ನು ಪಡೆದುಕೊಂಡು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಸೆಪ್ಟೆಂಬರ್ 12 ಕ್ಕೆ ಜಾಮೀನು ಅರ್ಜಿ ವಾದ ಮಾಡಿ ಸೆ.16ಕ್ಕೆ ಜಾಮೀನು ಅರ್ಜಿ ಆದೇಶಕ್ಕೆ ನಿಗದಿಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!