ವಿಟ್ಲ: ಬೈಕಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ
ವಿಟ್ಲ: ಅಳಿಕೆ ಗ್ರಾಮದ ಎರುಂಬು ರಸ್ತೆಯಲ್ಲಿ ಬೈಕಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಯುವಕರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳಪದವು ನಿವಾಸಿ ಸನತ್ ಕುಮಾರ್ (23), ಮಹಮ್ಮದ್ ರಾಝಿಕ್ (23) ಹಾಗೂ ಕೋಡಪದವು ನಿವಾಸಿ ಚೇತನ್ (23) ಎಂದು ಗುರುತಿಸಲಾಗಿದೆ.
ಪೊಲೀಸರು ಸಂಶಯಾಸ್ಪದವಾಗಿ ನಿಂತಿದ್ದ ದ್ವಿಚಕ್ರ ವಾಹನವನ್ನು ತಡೆದು ವಿಚಾರಣೆ ನಡೆಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದುದು ಬಹಿರಂಗವಾಗಿದೆ.
ಕಾರ್ಯಾಚರಣೆಯಲ್ಲಿ 6.27 ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್ ಫೋನ್‌ಗಳು, ಹಾಗೂ ಒಂದು ದ್ವಿಚಕ್ರ ವಾಹನ ಸೇರಿದಂತೆ ಒಟ್ಟು P17,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




