ಬಾಲಕಿಯ ಕೊಲೆ ಪ್ರಕರಣ: ಆರೋಪಿ ಮಲತಾಯಿ ಬಂಧನ
ಬೀದರ್: ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್‌ಗೆ ಕರೆದೊಯ್ದು ಮೂರನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.
7 ವರ್ಷದ ಸಾನ್ವಿ ಮೃತ ಬಾಲಕಿ ಹಾಗೂ ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ. ಆ.27ರಂದು ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ 3ನೇ ಮಹಡಿಗೆ ಕರೆದೊಯ್ದಿದ್ದಳು. ಈ ವೇಳೆ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು.
ಆ ದಿನ ಎಲ್ಲರೂ ಸಾನ್ವಿ ಆಯತಪ್ಪಿ ಬಿದ್ದಳು ಎಂದು ನಂಬಿದ್ದರು. ಆ.28ರಂದು ಮೃತ ಬಾಲಕಿ ತಂದೆ ಸಿದ್ಧಾಂತ ಗಾಂಧಿಗಂಜ್ ಠಾಣೆಯಲ್ಲಿ ಆಕಸ್ಮಿಕ ಸಾವು ದೂರು ನೀಡಿದ್ದರು.




