ಬೆಳ್ತಂಗಡಿ: ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಎಸ್‌ಐಟಿ ಶೋಧ ಕಾರ್ಯದಲ್ಲಿ ಅಸ್ತಿಪಂಜರಗಳು ಪತ್ತೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಎಸ್‌ಐಟಿ ಶೋಧ ಕಾರ್ಯ ಆರಂಭಿಸಿದ ಸ್ವಲ್ಪ ಹೊತ್ತಿನಲ್ಲೇ ಅಸ್ತಿಪಂಜರಗಳು ಪತ್ತೆಯಾಗಿದೆ. ಅಧಿಕೃತ ಮಾಹಿತಿ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಾಗಿದೆ.
ಎಸ್‌ಐಟಿ ಅಧಿಕಾರಿಗಳು ಬುಧವಾರ ಬಂಗ್ಲೆಗುಡ್ಡದಲ್ಲಿ ಪರಿಶೀಲನೆ ಆರಂಭಿಸಿದ್ದು ಈ ಹಿಂದೆ ಸಾಕ್ಷಿ ದೂರುದಾರ ಗುರುತಿಸಿದ 11ನೇ ಸ್ಥಳದ ಸಮೀಪವೇ ಅಸ್ತಿ ಪಂಜರಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಪತ್ತೆಯಾಗಿರುವ ಮೂಳೆಗಳನ್ನು ಎಸ್‌ಐಟಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.




