March 13, 2026

ಧರ್ಮಸ್ಥಳ ಪ್ರಕರಣ: ಬಕೆಟ್ ನಲ್ಲಿ ಮೂಳೆ, ತಲೆಬುರುಡೆ ತುಂಬಿಕೊಂಡು ಬಂದ SIT ತಂಡ

0
image_editor_output_image-299455591-1758176965649.jpg

ಬೆಳ್ತಂಗಡಿ: ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶವಗಳ ರಾಶಿ ಇದೆ ಎಂದು ಸೌಜನ್ಯ ಮಾವ ವಿಠಲಗೌಡ ಅವರ ಮಾಹಿತಿಯಂತೆ ಇಂದು ಎಸ್ಐಟಿ ತಂಡ ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ ಕಾರ್ಯ ನಡೆಸಿದ್ದು, ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಬೆಳವಣೆಗೆಯೊಂದು ಕಂಡು ಬಂದಿದ್ದು, ಶೋಧ ಕಾರ್ಯಾಚರಣೆ ವೇಳೆ ಮಾನವನ ತಲೆ ಬುರುಡೆ ಹಾಗೂ ಮೂಳೆಗಳು ಸಿಕ್ಕಿದೆ ಎಂದು ವರದಿಯಾಗಿದೆ.

ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ ಎಂದು ಹೇಳಿರುವ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಇಂದು (ಸೆಪ್ಟೆಂಬರ್ 17) ಶೋಧಕಾರ್ಯ ನಡೆಸಿದ್ದು, ಮೊದಲಿಗೆ ಮೂಳೆಗಳು ಪತ್ತೆಯಾಗಿವೆ. ಬಳಿಕ ಮಾನವನ ಅಸ್ಥಿಪಂಜರ ಹಾಗೂ ತಲೆ ಬುರುಡೆ ಪತ್ತೆಯಾಗಿದೆ. ಸುದ್ದಿವಾಹಿನಗಳಲ್ಲಿ ಬಂದಿರುವ ಮಾಹಿತಿಗಳ ಪ್ರಕಾರ 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.

ಪಾಯಿಂಟ್ 11ರ ಆಸುಪಾಸಿನಲ್ಲಿ ಭೂಮಿಯ ಮೇಲ್ಭಾಗದಲ್ಲೇ ಮಾನವನ ಮೂಳೆಗಳು ಪತ್ತೆಯಾಗಿವೆ. ಮೂಳೆ ಪತ್ತೆಯಾದ ಸ್ಥಳದಲ್ಲೇ ಬಟ್ಟೆಯ ತುಂಡುಗಳೂ ಪತ್ತೆಯಾಗಿವೆ. ಮೂಳೆಗಳನ್ನು ಪೈಪ್‌ಗಳಲ್ಲಿ ಸಂಗ್ರಹಿಸಿ, ಮಣ್ಣಿನ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಸದ್ಯ ಜೈಲು ಸೇರಿದ್ದಾನೆ. ಇದರ ನಡುವೆ ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ ಎಂದು ಆರೋಪಿಸಿದ್ದಾರೆ. ಇದೇ ಹೇಳಿಕೆ ಸಂಚಲನ ಸೃಷ್ಟಿ ಮಾಡಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ಕೊಟ್ಟಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡಕ್ಕೆ ಪ್ರವೇಶ ಮಾಡಿದ್ದು ಶೋಧ ನಡೆಸಿದ್ದಾರೆ.

ಇನ್ನು ಭೂಮಿಯ ಮೇಲ್ಭಾಗದಲ್ಲೇ ಅಸ್ಥಿಪಂಜರ, ಅವಶೇಷಗಳು ಪತ್ತೆ ಆಗಿದ್ದು, ಬಕೆಟ್ ನಲ್ಲಿ ಮೂಳೆ, ತಲೆಬುರುಡೆ ತುಂಬಿಕೊಂಡ ಎಸ್‌ಐಟಿ, ಪಿವಿಸಿ ಪೈಪ್‌ನ್ನ ಸೀಲ್‌ ಮಾಡಿ ಕಾಡಿನಿಂದ ಹೊರಗೆ ತಂದಿದ್ದಾರೆ.

ಒಟ್ಟಿನಲ್ಲಿ ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರ, ಮೂಳೆಗಳು ತನಿಖೆಯನ್ನ ಹೊಸ ದಿಕ್ಕಿಗೆ ಹೊರಳಿಸಿದ್ದು, ಇದರಿಂದ ಹೊಸ ಕಥೆ ಹೊರಗೆ ಬರುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ

Leave a Reply

Your email address will not be published. Required fields are marked *

error: Content is protected !!