March 13, 2026

ಬಸ್ ಇಳಿಯುತ್ತಿದ್ದಂತೆ ಮಚ್ಚಿನಿಂದ ದಾಳಿ ನಡೆಸಿ ಯುವಕನ ಕೊಲೆ

0
image_editor_output_image-757135793-1758177188931.jpg

ಚಿಕ್ಕೋಡಿ: ಬಸ್ ಇಳಿಯುತ್ತಿದ್ದಂತೆ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದ ಪ್ರಕರಣ ಹುಕ್ಕೇರಿ ಶಹಾಬಂದರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕ ಕೆಲಸ ಮುಗಿಸಿ ಊರಿಗೆ ವಾಪಸ್ ಆಗಿದ್ದ. ಈ ವೇಳೆ ಬಸ್ ಇಳಿಯುತ್ತಿದ್ದಂತೆ ಹಿಂದಿನಿಂದ ಬಂದು ಮಚ್ಚಿನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!