March 13, 2026

ಮಂಗಳೂರು: ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ವಿದ್ಯಾರ್ಥಿ ಚಾಂಪಿಯನ್

0
image_editor_output_image-1147620181-1758178524643

ನಂತೂರು: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ 2025-26ನೇ ಸಾಲಿನ  ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ಅವರು 14ರ ವಯೋಮಾನ ವಿಭಾಗದ 50 ಮೀ., 100 ಮೀ. ಮತ್ತು 200 ಮೀ.  ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 3 ಚಿನ್ನದ ಪದಕಗಳನ್ನು ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿದ್ದಾರೆ.

ಅಲ್ಲದೆ 3 ಸ್ಪರ್ಧೆಗಳಲ್ಲಿಯೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  ಮಾತ್ರವಲ್ಲದೇ ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಲು ದ.ಕ. ಜಿಲ್ಲಾ ಮಟ್ಟದ ರಿಲೇ ತಂಡವನ್ನು ಪ್ರತಿನಿಧಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!