March 13, 2026

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು

0
image_editor_output_image-1054545721-1758269816799.jpg

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ 2 ತಲವಾರ್ ಮತ್ತು 1 ಬಂದೂಕು ಪತ್ತೆಯಾದ ಬಗ್ಗೆ ಎಸ್.ಐ.ಟಿ ಅಧಿಕಾರಿ ಸೆಪ್ಟೆಂಬರ್ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 19 ರಂದು ಬೆಳಗ್ಗೆ 6 ಗಂಟೆಗೆ ಉಜಿರೆ ತಿಮರೋಡಿ ನಿವಾಸಕ್ಕೆ ಬಂಧಿಸಲು ತೆರಳಿದಾಗ ಮನೆಯಿಂದ ಮೊದಲೇ ಮಹೇಶ್ ಶೆಟ್ಟಿ ತಿಮರೋಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಬುರುಡೆ ಪ್ರಕರಣದ ವಿಚಾರವಾಗಿ ಬೆಳ್ತಂಗಡಿ ಎಸ್‌ಐಟಿ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಆಗಸ್ಟ್ 26ರಂದು ಶೋಧ ನಡೆಸಿದ್ದರು. ಈ ವೇಳೆ ಅಲ್ಲಿ ಎರಡು ತಲವಾರು, ಒಂದು ಬಂದೂಕು ಸಿಕ್ಕಿತ್ತು. ಅದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 18ರಂದು ಉಜಿರೆ ತಿಮರೋಡಿಯವರ ಮನೆಗೆ ಮಹಜರು ನಡೆಸಲು ಹೋಗಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ.

Leave a Reply

Your email address will not be published. Required fields are marked *

error: Content is protected !!