ಕ್ಯಾಲಿಫೋರ್ನಿಯಾ: ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಪೊಲೀಸರು
ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೊಲೀಸರು ಭಾರತೀಯ ಟೆಕ್ಕಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ 30 ವರ್ಷದ ಭಾರತೀಯ ಎಂಜಿನಿಯರ್‌ನನ್ನು ಹತ್ಯೆ ಮಾಡಲಾಗಿದೆ.
ಸೆಪ್ಟೆಂಬರ್ 3 ರಂದು ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಮೊಹಮ್ಮದ್ ನಿಜಾಮುದ್ದೀನ್ ತನ್ನ ರೂಮ್‌ಮೇಟ್‌ನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ತಡೆಯಲು ಬೆನ್ನಟ್ಟುತ್ತಿದ್ದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ, ಇದರಿಂದಾಗಿ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ನಿವಾಸಿ ಮೊಹಮ್ಮದ್ ಅವರ ತಂದೆ ಮೊಹಮ್ಮದ್ ಹಸ್ನುದ್ದೀನ್ ಅವರು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಅವರು ತಮ್ಮ ಮಗನ ಶವವನ್ನು ಭಾರತಕ್ಕೆ ತರುವಂತೆ ವಿದೇಶಾಂಗ ಸಚಿವರಿಗೆ ಮನವಿ ಮಾಡಿದ್ದಾರೆ.





