ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಆತ್ಮಹತ್ಯೆ
ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ.
ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದರು.




