ಪುಂಜಾಲಕಟ್ಟೆ: KSRTC ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು
ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಉಜಿರೆ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ವಗ್ಗ ಕಡೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದ ಗಂ*ಭೀರವಾಗಿ ಗಾ*ಯಗೊಂಡಿದ್ದ ಬೈಕ್ ಸವಾರ ರಾಜೇಶ್ ನನ್ನು ಆಸ್ಪತ್ರೆಗೆ ಅಂಬ್ಯುಲೆನ್ಸ್ ವಾಹನದ ಮೂಲಕ ಕಳುಹಿಸಲಾಗಿದೆಯಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.




