ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ 2ನೇ ನೊಟೀಸ್ ಜಾರಿ ಮಾಡಿದ ಪೊಲೀಸರು
ಬೆಳ್ತಂಗಡಿ: ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಪೊಲೀಸರು ದಾಖಲಿಸಿರುವ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಗೈರು ಹಾಜರಾಗಿದ್ದಾರೆ. ಈ ಹಿನ್ನಲೆ ಇದೀಗ ತಿಮರೋಡಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್ ಐಟಿ ಶೋಧದ ವೇಳೆ ಆಗಸ್ಟ್ 26 ರಂದು ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ತಿಳಿಸಲು ಬೆಳ್ತಂಗಡಿ ಪೊಲೀಸರು ಸೆ.19 ರಂದು ಮನೆಗೆ ತೆರಳಿದಾಗ ಮಹೇಶ್ ಶೆಟ್ಟಿ ಮನೆಯಲ್ಲಿ ಇರಲಿಲ್ಲ. ಬಳಿಕ ಪೊಲೀಸರು ಗೋಡೆಗೆ ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದರು.




