March 4, 2026

ಪುತ್ತೂರು: ಮತ್ತೊಂದು ಕೆಎಸ್ ಆರ್ಟಿಸಿ ಬಸ್ ಅಪಘಾತ: ಕಾರು ನಜ್ಜುಗುಜ್ಜು

0
image_editor_output_image-411720898-1758607801848.jpg

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಒಂದು ವಾರದೊಳಗೆ ಮೂರು ಕೆಎಸ್ಆರ್ ಟಿಸಿ ಬಸ್ ಅಪಘಾತ ಪ್ರಕರಣ ಸಂಭವಿಸಿದೆ.

ಇಂದು ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರೊಂದರ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಆರ್ಯಾಪು ಗ್ರಾಮದ ಸಂಟ್ಯಾರ್ ಎಂಬಲ್ಲಿ ಸಂಭವಿಸಿದೆ.

ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್ಸಿಗೆ, ಸುಳ್ಯ ಕಡೆಯಿಂದದ ಪುತ್ತೂರಿನತ್ತ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ತಿರುಗಿ ವಿರುದ್ಧ ದಿಕ್ಕಿನಲ್ಲಿ ನಿಂತಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿ ಇದ್ದ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.”

Leave a Reply

Your email address will not be published. Required fields are marked *

error: Content is protected !!